ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ರಕ್ಷಿಸಲು ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.
ಈ ಹಿಂದೆ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಅನಾಹುತ ಸಂಭವಿಸಿದೆಯೋ ಅಂತಹ ಕಡೆ ಅಧಿಕಾರಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಮಳೆಯಿಂದಾಗಿ ಯಾರಿಗೂ ತೊಂದರೆಯಾಗಬಾರದು. ಎಷ್ಟು ಸಾಧ್ಯವೋ ಅಷ್ಟು ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ