ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

admin
1 Min Read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ನಿಲ್ಲುತ್ತಿಲ್ಲ.

ಇಂದಿನಿಂದ ಬೆಂಗಳೂರು, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 14 ಮತ್ತು ನವೆಂಬರ್ 15ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share This Article
Leave a Comment