ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಅಬ್ಬರದ ಮಳೆಯ ಮುನ್ಸೂಚನೆ

Date:

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಶಿವಮೊಗ್ಗದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಸೆಪ್ಟೆಂಬರ್‌ 5 ಮತ್ತು 6ಕ್ಕೆ ಕರಾವಳಿ ಮತ್ತು ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ರಾಜ್ಯ ಕರಾವಳಿಯಲ್ಲಿ ಸೆಪ್ಟೆಂಬರ್‌ 4ಕ್ಕೆ ಮಿಂಚು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಸುಳಿ ಗಾಳಿ ಸೃಷ್ಟಿಯಾಗಿ ದಕ್ಷಿಣ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯತ್ತ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ವರುಣನ ಆರ್ಭಟ ಇನ್ನೂ ಕೆಲ ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

 

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...