No menu items!
11.1 C
Munich
Wednesday, April 29, 2026

ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ

Must read

ಬೆಂಗಳೂರು, ಜೂನ್ 17: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್‌ಪುರ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಸೇರಿದಂತೆ ಹಲವು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

 

ಆಗುಂಬೆ, ಕೊಲ್ಲೂರು, ಕದ್ರ, ಕೊಟ್ಟಿಗೆಹಾರ, ಭಾಗಮಂಡಲ, ಕಾರವಾರ, ಬೆಳ್ತಂಗಡಿ, ಉಪ್ಪಿನಂಗಡಿ, ಗೋಕರ್ಣ, ಕಳಸ, ತಾಳಗುಪ್ಪ, ಸಿದ್ದಾಪುರ, ಶೃಂಗೇರಿ, ಯಲ್ಲಾಪುರ, ಜಯಪುರ, ಹುಂಚದಕಟ್ಟೆ, ವಿರಾಜಪೇಟೆಯಲ್ಲಿ ಅಧಿಕ ಮಳೆಯಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article