No menu items!
12.4 C
Munich
Wednesday, April 29, 2026

ರಾಜ್ಯದ ಈ ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ

Must read

ಬೆಂಗಳೂರು, ಸೆಪ್ಟೆಂಬರ್ 28: ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅಧಿಕ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ತುಮಕೂರಿನಲ್ಲಿ ಒಣಹವೆ ಇರಲಿದೆ.

 

ಮುಂದಿನ 24 ಗಂಟೆಗಳಲ್ಲಿ, ಕರಾವಳಿಯ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಚತ್ತೀಸ್‌ಗಢದ ಕೆಲವು ಭಾಗಗಳು, ವಿದರ್ಭಾ, ಮರಾಠವಾಡ, ತೆಲಂಗಾಣ, ಮಧ್ಯಪ್ರದೇಶದ ಕೆಲವು ಭಾಗಗಳು, ಆಗ್ನೇಯ ರಾಜಸ್ಥಾನ ಮತ್ತು ಗುಜರಾತ್, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಲಾಬ್ ಚಂಡ ಮಾರುತದ ಪರಿಣಾಮ ಮಳೆಯಾಗುವ ನಿರೀಕ್ಷೆ ಇದ್ದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಲಕ್ಷದ್ವೀಪ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಸಹ ಮಳೆಯಾಗುವ ಸೂಚನೆಯಲ್ಲಿ ಹವಾಮಾನ ಇಲಾಖೆ ನೀಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article