ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ!

admin
0 Min Read

ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಮಳೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಇನ್ನು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿಯಲು ಪ್ರಾರಂಭಿಸಿದೆ. 

ಐಎಂಡಿ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ.

ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಮಳೆಯಾಗಲಿದೆ. ಅದ್ರಂತೆ, ಉತ್ತರ ಒಳನಾಡಿನ ರಾಜ್ಯದ ಜಿಲ್ಲೆಗಳಲ್ಲಿಯೂ ಕೊಂಚ ಮಳೆಯಾಗುವ ಸಾಧ್ಯತೆಯಿದೆ.

Share This Article
Leave a Comment