No menu items!
11.1 C
Munich
Wednesday, April 29, 2026

ರಾಜ್ಯದ ಈ 5 ಜಿಲ್ಲೆಗಳಲ್ಲಿ 0 ಕೊರೊನಾ ಕೇಸ್!

Must read

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 1,000 ಗಡಿ ದಾಟುತ್ತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.67ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1003 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1199 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 18 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37573 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

 

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2966194ಕ್ಕೆ ಏರಿಕೆಯಾಗಿದೆ. ಒಟ್ಟು 2912633 ಸೋಂಕಿತರು ಗುಣಮುಖರಾಗಿದ್ದು. 15960 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 1003 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 15 ಬೆಂಗಳೂರು 310, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 37, ಚಿತ್ರದುರ್ಗ 10, ದಕ್ಷಿಣ ಕನ್ನಡ 124, ದಾವಣಗೆರೆ 3, ಧಾರವಾಡ 9, ಗದಗ 1, ಹಾಸನ 48, ಹಾವೇರಿ 0, ಕಲಬುರಗಿ 5, ಕೊಡಗು 96, ಕೋಲಾರ 14, ಕೊಪ್ಪಳ 0, ಮಂಡ್ಯ 31, ಮೈಸೂರು 46, ರಾಯಚೂರು 3, ರಾಮನಗರ 2, ಶಿವಮೊಗ್ಗ 27, ತುಮಕೂರು 61, ಉಡುಪಿ 94, ಉತ್ತರ ಕನ್ನಡ 35, ವಿಜಯಪುರ 0, ಯಾದಗಿರಿ 2 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article