ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್

Date:

ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಕ್ಕೆ ನೈರುತ್ಯ ಮುಂಗಾರು ಜುಲೈ 10 ರಂದು ಭಾರೀ ಮಳೆ ತರಲಿದೆ. ನಂತರದ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ಸೂಚನೆ ನೀಡಿತ್ತು.
ಅದರಂತೆಯೇ ಗುರುವಾರ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅಲ್ಲದೆ, ಮುಂದಿನ ನಾಲ್ಕು-ಐದು ದಿನ ಭಾರೀ ಮಳೆಯ ನಿರೀಕ್ಷೆ ಇದೆ. ಪಶ್ಚಿಮ ಘಟ್ಟ – ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ.


ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈ ವರೆಗೆ ಹೇಳಿಕೊಳ್ಳುವಂತಹ ಉತ್ತಮ ಮಳೆಯಾಗಿರಲಿಲ್ಲ. ಮುಂದಿನ ಮುರ್ನಾಲ್ಕು ದಿನ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ.

ಆರೆಂಜ್ ಅಲರ್ಟ್ ಘೋಷಣೆ :

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಚಾಮರಾನಗರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...