No menu items!
15.2 C
Munich
Wednesday, April 29, 2026

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Must read

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ವಿರಾಮ ದೊರೆತಿದೆ. ಇಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತಿ ಕಡಿಮೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ವರುಣಾರ್ಭಟಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ.ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 10 ಕಿ.ಮೀ. ಇರಲಿದೆ. ಒಟ್ಟಾರೆಯಾಗಿ, ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article