ನೆರೆ ಪರಿಹಾರದ ವಿಚಾರದ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು 38 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ ಎರಡು ತಿಂಗಳ ಬಳಿಕ 1200 ಕೋಟಿ ರೂಪಾಯಿ ನೆರೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ದೂರಿದ್ದಾರೆ.
ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂದು ಹೇಳುವುದು ಸರಿಯಲ್ಲ. ಪ್ರತಿ ತಿಂಗಳು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಮೂಲಗಳಿಂದ ಆದಾಯ ಬರುತ್ತದೆ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣ ನೀಡಬೇಕಿತ್ತು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಖಜಾನೆಯಲ್ಲಿ ಹಣ ಇಲ್ಲ ಎಂದು ಹೇಳುತ್ತಾರೆ. ಖಜಾನೆಯಲ್ಲಿ ಹಣ ಖಾಲಿಯಾಗಲು ಸಾದ್ಯವೆ ಇಲ್ಲ ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಹಣ ಸಂಗ್ರಹವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಹೆಚ್ಚಿನ ಪರಿಹಾರ ಹಣ ನೀಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ತಿಳಿಸಿದ್ದಾರೆ