ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

tnit editors
1 Min Read

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ ಸತ್ಯವನ್ನು ಬಿಚ್ಚಿಟ್ಟು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ B. Y. ವಿಜಯೇಂದ್ರ ಒತ್ತಾಯಿಸಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳನ್ನು ನಿರ್ವಹಿಸಲು ಹಣಕಾಸಿನ ಸಮಸ್ಯೆ ಎದುರಾಗಿದೆ. ಇದರಿಂದ ಯಾವುದೇ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

“ಮುಖ್ಯಮಂತ್ರಿಗಳೇ, ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂಮುಕ್ಕಾಲು ವರ್ಷಗಳಾಗಿವೆ. ಇನ್ನೂ ಬಿಜೆಪಿ ಸರ್ಕಾರವನ್ನು ದೂರಾಡುವುದು ಸರಿಯಲ್ಲ. ಒಂದು ವರ್ಷದೊಳಗೆ ನೇಮಕಾತಿ ಮಾಡುವ ಭರವಸೆ ನೀಡಿದ್ದೀರಿ. ಸುಳ್ಳು ಹೇಳಿಕೆಗಳು ಹಾಗೂ ಆರೋಪಗಳನ್ನು ಬಿಟ್ಟು, ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು” ಎಂದು ಅವರು ಆಗ್ರಹಿಸಿದರು.

ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸದಿದ್ದರೆ ಬಿಜೆಪಿ ಹೋರಾಟಕ್ಕೆ ಇಳಿಯಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು. ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತರಾದವರ ಹುದ್ದೆಗಳಿಗೆ ನೇಮಕಾತಿ ಮಾಡಲು ಸರ್ಕಾರದ ಅನುಮತಿ ಕೇಳಲಾಗಿತ್ತು. ಸರ್ಕಾರ ಅನುಮತಿ ನೀಡಿದರೂ ಒಂದು ವರ್ಷ ಎಂಟು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಪ್ರಕ್ರಿಯೆ ಮುಂದುವರಿಸಲು ಸರ್ಕಾರ ಸಹಕರಿಸುತ್ತಿಲ್ಲ ಎಂದು ಅವರು ಟೀಕಿಸಿದರು.

Share This Article