No menu items!
20.3 C
Munich
Friday, August 21, 2026

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Must read

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ನವದೆಹಲಿ: ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.
ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.
ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದರು.‌

- Advertisement -spot_img

More articles

- Advertisement -spot_img

Latest article