No menu items!
7.2 C
Munich
Thursday, April 30, 2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

Must read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಲಘು ಮಳೆಯ ಸಾಧ್ಯತೆ ಇದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಇಂದು ಮಂಜು ಮುಸುಕಿದ ವಾತಾವರಣ ಕಾಣಿಸಿಕೊಳ್ಳಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣ ಹವಾಮಾನ ಇರುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 11 ಕಿ.ಮೀ. ಇರಲಿದ್ದು, ವಾತಾವರಣ ಶಾಂತವಾಗಿರಲಿದೆ ಎಂದು ಇಲಾಖೆ ವಿವರಿಸಿದೆ.

- Advertisement -spot_img

More articles

- Advertisement -spot_img

Latest article