ರಾಜ್ಯದ ಹಾಸ್ಟೆಲ್‌ಗಳಿಗೆ ಹೊಸ ಮಾರ್ಗಸೂಚಿ

0
39

ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಆತಂಕ ಹಾಗೂ ಕೊರೊನಾ(Corona Virus) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ (Hostel) ಗಳಲ್ಲಿ ಹೊಸ ಮಾರ್ಗಸೂಚಿ (New Guideline)ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು.

 

ರಾಜ್ಯದಲ್ಲಿ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಬಗ್ಗೆ ನಿರ್ಧರಿಸಿಲ್ಲ. ಒಂದು ವಾರದ ಬೆಳವಣಿಗೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು. ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆ ಬಗ್ಗೆಯೂ ಒಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ಇನ್ನು ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರೆಯಲಿದೆ, ಒಂದು ವಾರದ ಬೆಳವಣಿಗೆ ಅವಲೋಕಿಸಿ ನೈಟ್ ಕರ್ಪ್ಯೂ, ವಿಕೇಂಡ್ ಕರ್ಪ್ಯೂ, ಕ್ರಿಸ್ ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಸದ್ಯಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದರು.

LEAVE A REPLY

Please enter your comment!
Please enter your name here