ರಾಜ್ಯಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಫೆ.27 ರಂದು ಚುನಾವಣೆ

0
366

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇದೀಗ ರಾಜ್ಯಸಭಾ ಚುನಾವಣಾ ದಿನಾಂಕ ಪ್ರಕಟಿಸಿದೆ. ಹೌದು 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಮತದಾನ ನಡೆಯಲಿದೆ. ಇದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಕರ್ನಾಟಕ ಸೇರಿ ಒಟ್ಟು 13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್‌ 2ರಂದು ಮುಗಿಯಲಿದ್ದರೆ, ಎರಡು ರಾಜ್ಯಗಳ ಉಳಿದ ಆರು ಸದಸ್ಯರು ಏಪ್ರಿಲ್‌ 3ರಂದು ನಿವೃತ್ತರಾಗಲಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಜಿ.ಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಾಸೀರ್ ಹುಸೇನ್, ರಾಜೀವ್ ಚಂದ್ರಶೇಖರ್ ಅವರ ಅವಧಿ ಅಂತ್ಯವಾಗಲಿದೆ.
ಚುನಾವಣಾ ಆಯೋಗದ ಪ್ರಕಾರ, ರಾಜ್ಯಸಭಾ ಚುನಾವಣೆಗೆ ಫೆ.8ರಿಂದ ನಾಮಪತ್ರ ಸಲ್ಲಿಕೆ ಆರಂಭವಾ ಗಲಿದ್ದು, ಫೆ.15 ಕೊನೆಯ ದಿನವಾಗಿದೆ. ಫೆ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ.20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ 27 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ನಡುವೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.