ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 55 ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ದಾಳಿ ಮಾಡಿ ಶಾಕ್ ಕೊಟ್ಟಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ. ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರು ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅಖ್ತಾರ್ ಅಲಿ, ಭದ್ರಾವತಿ ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಎಸ್.ನಾಗೇಶ್, ಶಿವಮೊಗ್ಗದ ತೋಟಗಾರಿಕೆ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರಕಾಶ್, ಮಂಡ್ಯದ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಂಗಳೂರಿನ ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್, ಬೆಂಗಳೂರು ಉತ್ತರ ಉಪವಿಭಾಗದ ಎಫ್‌ಡಿಎ ಟಿ.ಆರ್. ಮಂಜುನಾಥ್ ಮನೆಗಳ ಮೇಲೆ ದಾಳಿ ನಡೆದಿದೆ.
ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ..!
Date: