ರಾಜ್ಯಾದ್ಯಂತ ಭಾರೀ ಮಳೆ: ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇಂದು ಕರಾವಳಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೂ ಎಚ್ಚರಿಕೆ ನೀಡಲಾಗಿದ್ದು, ನಾಳೆಯಿಂದ ಕರಾವಳಿಯನ್ನೂ ಒಳಗೊಂಡಂತೆ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಮಳೆಯೊಂದಿಗೆ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಒಂದು ವಾರ ನಿರಂತರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.