ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ!

Date:

ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ!

ಬೆಂಗಳೂರು: ರಾಜ್ಯದಲ್ಲಿ ಲೋಕಾಯುಕ್ತ ಬೇಟೆ ಮುಂದುವರೆದಿದೆ. ಏಕಕಾಲಕ್ಕೆ ರಾಜ್ಯದ ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಸೇರಿದಂತೆ ಹಲವು ಕಡೆ ಲೋಕಾ ಬಿಸಿ ಮುಟ್ಟಿಸಿದೆ. ಮುಂಜಾನೆ ಸಿಹಿ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಎಂಟ್ರಿ ಶಾಕ್ ನೀಡಿದೆ.
ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

Share post:

Subscribe

spot_imgspot_img

Popular

More like this
Related

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...