No menu items!
10.8 C
Munich
Wednesday, April 29, 2026

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮೇಲೆ ಯಡಿಯೂರಪ್ಪ ಬೇಸರಗೊಂಡಿದ್ದಾರೆ !?

Must read

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಾಗೂ ಕೋರ್ ಕಮಿಟಿ ಸದಸ್ಯರು ಸೇರಿ ಆಯೋಜಿಸಿದ್ದ  ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಲಾಗಿದ್ದು, ಪ್ರಮುಖವಾಗಿ ಭಾನುವಾರದಿಂದ ರಾಜ್ಯಾದ್ಯಂತ ಸಕ್ರಿಯ ಸದಸ್ಯರನ್ನು ನೋಂದಾಯಿಸುವ ಅಭಿಯಾನಕ್ಕೆ ಚಾಲನೆ ನೀಡಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಜಿಲ್ಲೆಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಗಿದೆ.

ನಿಗಮ-ಮಂಡಳಿಗಳ ನೇಮಕಾತಿ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ ನಳಿನ್ ಕುಮಾರ್ ಕಟೀಲ್, ನೇಮಕಾತಿ ಸಂದರ್ಭದಲ್ಲಿ ಪಕ್ಷದ ಗಮನಕ್ಕೆ ತರಬೇಕೆಂದು ಸೂಚಿಸಿದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಗರಂ ಆದರೆಂದು ತಿಳಿದುಬಂದಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article