ರಾಜ್ಯಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ !

Date:

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಯ್ಕೆಯಾಗಿರುವುದರಿಂದ ಉಳಿದ ಆಕಾಂಕ್ಷಿಗಳಿಗೆ ನಿರಾಸೆಯಾಗುವುದು ಸಹಜ. ಆದರೆ ಅವರ ಆಯ್ಕೆಯಿಂದ ನಮಗೂ ಖುಷಿ ಇದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಪಕ್ಷದ ರಾಷ್ಟ್ರ ನಾಯಕರು ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಇದರಿಂದ ನಮಗೂ ಖುಷಿಯಾಗಿದೆ. ಆ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ ಎಂದಿದ್ದಾರೆ. ವಿಜಯೇಂದ್ರ ಅವರು ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದಾರೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ. ಅವರೊಟ್ಟಿಗೆ ಸೇರಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...