ರಾಜ್ಯೋತ್ಸವಕ್ಕೆ ಬಂತು ಹೊಸ ರೂಲ್ಸ್‌: ಡಿಕೆ ಶಿವಕುಮಾರ್‌ ಹೇಳಿದ್ದೇನು..?

Date:

ರಾಜ್ಯೋತ್ಸವಕ್ಕೆ ಬಂತು ಹೊಸ ರೂಲ್ಸ್‌: ಡಿಕೆ ಶಿವಕುಮಾರ್‌ ಹೇಳಿದ್ದೇನು..?

ಬೆಂಗಳೂರು: ನವೆಂಬರ್‌ 1 ರಂದು ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು.
ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರೋದು ಎಲ್ಲರಿಗೂ ಕಡ್ಡಾಯ ಎಂದರು.
ಇನ್ನೂ ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು. ಕನ್ನಡ ಸಂಘಟನೆಗಳು ರಿಗೂ ಹೆದರಿಸಬಾರದು. ಹಾಗೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...