ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ: ಸುರೇಶ್ ಬಾಬು ಆರೋಪ
ಬೆಂಗಳೂರು: ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನ್ಯಾ ರಾವ್ ಉಳಿಸಲು ಈ ಸರ್ಕಾರದವರು ಬೇಕಾದ್ರೆ ಮುಡಾ ಕೇಸ್‌ನಲ್ಲಿ ಸೈಟ್ ವಾಪಸ್ ಕೊಟ್ಟಂತೆ ಚಿನ್ನವನ್ನ ದುಬೈಗೆ ವಾಪಸ್ ಇಟ್ಟು ಬಾ ಅಂತ ಹೇಳಿದ್ರೂ ಅಚ್ಚರಿಯಿಲ್ಲ ಎಂದು ಲೇವಡಿ ಮಾಡಿದರು.
ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ. ಸರ್ಕಾರದ ವರ್ತನೆ ನೋಡಿದ್ರೆ ನಮಗೆ ಅನುಮಾನ ಬರುತ್ತದೆ. ರನ್ಯಾ ಪ್ರಕರಣದಲ್ಲಿ ಇಬ್ಬರು ಸಚಿವರ ಹೆಸರು ಕೇಳಿ ಬಂದಿದೆ. ಯಾರು ಅ ಸಚಿವರು ಎಂಬುದು ತನಿಖೆ ಆಗಬೇಕು. ಯಾರೇ ಪ್ರಭಾವಿಗಳು ಇದ್ದರೂ ಕ್ರಮ ಆಗಬೇಕು. ಯಾರು ಇದರ ಹಿಂದೆ ಇದ್ದಾರೆ ಬೆಳಕಿಗೆ ಬರಬೇಕು. ಸಿಬಿಐ ಇದರ ಬಗ್ಗೆ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಪೊಲೀಸರ ರಕ್ಷಣೆಯಲ್ಲಿ ರನ್ಯಾ ಓಡಾಡಿದ್ದಾಳೆ. ಸರ್ಕಾರಕ್ಕೆ ನಾಚಿಕೆ ಆಗಬೇಕು.14 ಕೆಜಿ ಚಿನ್ನ ಸಾಗಾಣೆ ಮಾಡ್ತಾರೆ ಅಂದರೆ ಗೃಹ ಇಲಾಖೆ ಇದರಲ್ಲಿ ಶಾಮೀಲಾಗಿದೆ ಅನ್ನಿಸುತ್ತೆ. ಸಿಐಡಿ ತನಿಖೆ ಯಾಕೆ ವಾಪಸ್ ಪಡೆದ್ರಿ? ಇದು ನಮಗೆ ಅನುಮಾನ ಬರ್ತಿದೆ. ರನ್ಯಾ ರಾವ್ ಉಳಿಸೋಕೆ ಸರ್ಕಾರ ಮುಂದಾಗ್ತಿರುವ ಅನುಮಾನ ಬರ್ತಿದೆ ಎಂದು ತಿಳಿಸಿದರು.