ಡಾ. ರಾಜ್ ಕುಮಾರ್ ಅವರ ಮೊಮ್ಮಗಳು ಮೊದಲ ಬಾರಿಗೆ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಎಂಟ್ರಿ ಕೊಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು
ಡಾ ರಾಜ್ ಕುಮಾರ್ ಅವರ ಮಗಳು ಪೂರ್ಣಿಮಾ ಮತ್ತು ರಾಮ್ ಕುಮಾರ್ ಪುತ್ರಿ ಧನ್ಯಾ ರಾಮ್ ಕುಮಾರ್ ನೃತ್ಯ, ಫಿಟ್ನೆಸ್, ನಟನೆ ಸೇರಿದಂತೆ ಮುಂತಾದ ತರಬೇತಿ ಪಡೆದು ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ.
ಮದುವೆಯ ಮಮತೆಯ ಕರೆಯೋಲೆ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟ ಸೂರಜ್ ಗೌಡ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಧನ್ಯಾ ನಾಯಕಿಯಾಗಿ ಆಯ್ಕೆಯಾಗಿದ್ದು ಮೊದಲ ಬಾರಿಗೆ ಬಣ್ಣ ಹಚ್ಚುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಸಿನಿಮಾಗೆ ಸ್ವತಃ ಸೂರಜ್ ಗೌಡ ಕಥೆ ಬರೆದಿದ್ದು, ಈ ಚಿತ್ರಕ್ಕೆ ಮೊದಲ ಬಾರಿಗೆ ಸುಮನ್ ಜಾದೂಗಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ, ಸಿನಿಮಾಗೆ ರಘು ದೀಕ್ಷಿತ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.