ರಾತ್ರಿ 9 ಗಂಟೆಗೆ ಅಂಗಡಿ ಮುಚ್ಚಿಸಲು ಪೊಲೀಸರಿಗೆ ಸೂಚನೆ

Date:

ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈಗ ಕರ್ಫ್ಯೂ ನಿಯಮಗಳನ್ನು ಕಠಿಣವಾಗಿ ಜಾರಿಗೊಳಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾತ್ರಿ 9 ಗಂಟೆಗೆ ಅಂಗಡಿಗಳು ಬಾಗಿಲು ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

 

ಕೋವಿಡ್ 3ನೇ ಅಲೆ ಹರಡುವಿಕೆ ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು, ಸಚಿವ ಆರ್. ಅಶೋಕ ಸುಳಿವು ನೀಡಿದ್ದರು. ಈ ಹಿನ್ನಲೆಯಲ್ಲಿ ನಗರದಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ರಾತ್ರಿ 9 ಗಂಟೆಯ ಬಳಿಕ ಅಂಗಡಿ, ಶಾಪ್‌ಗಳನ್ನು ತೆರೆದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. ಪೊಲೀಸರು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇದನ್ನು ಜಾರಿಗೆ ತರಲು ನಗರದಲ್ಲಿ ಕಾರ್ಯಾಚರಣೆಯನ್ನು ನಡೆಸಲಿದ್ದಾರೆ.

ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಈ ಕುರಿತು ಮಾತನಾಡಿದ್ದಾರೆ, “ಮಾನ್ಯ ಮುಖ್ಯಮಂತ್ರಿಗಳು ಬಹಳ ಸ್ಪಷ್ಟವಾಗಿ ನೈಟ್ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಈ ಕುರಿತು ನಿರ್ದೇಶನ ನೀಡಲಾಗಿದೆ” ಎಂದು ಹೇಳಿದ್ದಾರೆ.

 

ಶನಿವಾರ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತು ಸಭೆಯನ್ನು ನಡೆಸಿದ್ದರು. ಸರ್ಕಾರ ಈಗಾಗಲೇ ಕೇರಳ, ಮಹಾರಾಷ್ಟ್ರ ಸಂಪರ್ಕಿಸುವ 8 ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂವನ್ನು ಜಾರಿಗೆ ತಂದಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ.

 

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...