ನಟಿ ರಾಧಿಕಾ ಕುಮಾರಸ್ವಾಮಿ ಕೆಲ ಕಾಲ ಚಿತ್ರರಂಗದಿಂದ ದೂರವಾಗಿದ್ದರೂ ಇದೀಗ ಮತ್ತೆ ಸಕ್ರಿಯರಾಗಿದ್ದಾರೆ. ಚಿತ್ರವೊಂದರ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ರಾಧಿಕಾ ಕುಮಾರಸ್ವಾಮಿ ಈಗ ಚೇತರಿಸಿಕೊಂಡಿದ್ದು, ಮತ್ತೆ ತಮ್ಮ ನೆಚ್ಚಿನ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ.
ಭೈರಾದೇವಿ ಚಿತ್ರದಲ್ಲಿ ಬ್ಯುಸಿಯಾಗಿದ್ದ ರಾಧಿಕಾ ಕುಮಾರಸ್ವಾಮಿ, ಈಗ ಬಹುಭಾಷಾ ನಟ ಅರ್ಜುನ್ ಸರ್ಜಾ ಜೊತೆ ತೆರೆ ಹಂಚಿಕೊಳ್ಳುತ್ತಿದ್ದು, ಈ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ.
ಸಮೀರ್ ನಿರ್ದೇಶನದ ‘ಕಾಂಟ್ರಾಕ್ಟ್’ ಚಿತ್ರದಲ್ಲಿ ರಾಧಿಕಾ ಸಾಫ್ಟ್ ವೇರ್ ಇಂಜಿನಿಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ, ಅರ್ಜುನ್ ಸರ್ಜಾ ಬ್ಯುಸಿನೆಸ್ ಮ್ಯಾನ್ ಆಗಿದ್ದಾರೆ. ಇದೀಗ ಚಿತ್ರದ ದೃಶ್ಯವೊಂದರಲ್ಲಿ ರಾಧಿಕಾ ಕುಮಾರಸ್ವಾಮಿ ಗೆಳತಿಯರೊಂದಿಗೆ ಸೇರಿ ಮದುವೆಗೆ ತಯಾರಿ ನಡೆಸಿದ್ದು, ಇದರ ಚಿತ್ರೀಕರಣ ಭರದಿಂದ ಸಾಗಿದೆ.