ಕಳೆದ ಕಲವು ದಿನಗಳಿಂದ ಬಿಟ್ಟು ಬಿಡದಂತೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರವನ್ನು ಮಾಡಿದ್ದ ಕುಮಾರಸ್ವಾಮಿಯವರು ಕರಾವಳಿಯಲ್ಲಿ ಪ್ರಕೃತಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು, ಆದರೆ ಇದೀಗ ಸಿ ಎಂ ಕುಮಾರಸ್ವಾಮಿಯವರಿಗೆ ಸಂಕಷ್ಟವೊಂದು ಎದುರಾಗಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಎರಡು ಕ್ಷೇತ್ರದಿಂದಲೂ ಕುಮಾರಸ್ವಾಮಿಯವರು ಸ್ಪರ್ಧಿಸಿದ್ರು, ಈ ಸಮಯದಲ್ಲಿ ಕುಮಾರಸ್ವಾಮಿ ಅವರು ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ 2ನೇ ಪತ್ನಿ ನಟಿ ರಾಧಿಕಾ ಮತ್ತು ಪುತ್ರಿ ಶಮಿಕಾ ಅವರ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಮತ್ತು ದಾಖಲಾತಿಯನ್ನು ದಾಖಲಿಸಿಲ್ಲ ಎಂದು ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕಂಪ್ಲೆಂಟ್ ನೀಡಿದ್ದಾರೆ.
ಕುಮಾರಸ್ವಾಮಿ ಮೇಲಿನ ಈ ದೂರನ್ನು ನಿನ್ನೆ ಪುರಸ್ಕರಿಸಿರುವ ವಿಶೇಷ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಮುಂಬರುವ ಮೇ 2ಕ್ಕೆ ಮುಂದೂಡಿ ಮಂಗಳವಾರ ಆದೇಶವನ್ನು ಹೊರಡಿಸಿದೆ.