ರಾಬರ್ಟ್​ ಶೂಟಿಂಗ್​ ಆರಂಭಕ್ಕೆ ಮುಹೂರ್ತ ಫಿಕ್ಸ್..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್ ಶೂಟಿಂಗ್ ಗೆ ಡೇಟ್​ ಫಿಕ್ಸ್ ಆಗಿದೆ. ನಟ ದರ್ಶನ್ ಅವರ 51ನೇ ಸಿನಿಮಾ ರಾಬರ್ಟ್… ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾಕ್ಕೆ ಹೀರೋಯಿನ್ ಇನ್ನೂ ಪಕ್ಕಾ ಆಗಿಲ್ಲ.
ದರ್ಶನ್ ಇಷ್ಟುದಿನ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದಲ್ಲಿ ನಿರತರಾಗಿದ್ದರು. ಹೀಗಾಗಿ ಸಿನಿಮಾ ಶೂಟಿಂಗ್ ಸಾಧ್ಯವಾಗಿರಲಿಲ್ಲ. ಈಗ ಶೂಟಿಂಗ್​ಗೆ ರೆಡಿಯಾಗಿದ್ದಾರೆ. ಮುಂದಿನ ಸೋಮವಾರದಿಂದ ಸಿನಿಮಾ ಶೂಟಿಂಗ್ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಈ ರಾಬರ್ಟ್​ಗೆ ಬಂಡವಾಳ ಹಾಕಿರುವುದು ಉಮಾಪತಿ. ದರ್ಶನ್ ಅವರ 50ನೇ ಸಿನಿಮಾ ಯಜಮಾನ ಮಾರ್ಚ್​ ನಲ್ಲಿ ರಿಲೀಸ್ ಆಗಿದ್ದು ಯಶಸ್ವಿ ಪ್ರದರ್ಶನ ಕಂಡಿದೆ. ಕುರುಕ್ಷೇತ್ರ ಸಿನಿಮಾ ಜೂನ್ ನಲ್ಲಿ ರಿಲೀಸ್ ಆಗುತ್ತದೆ ಎಂದು ಹೇಳಲಾಗುತ್ತಿದೆ. ಈಗ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಗುಡ್​​ನ್ಯೂಸ್​​ ನೀಡಿದೆ. ರಾಬರ್ಟ್ ಸಿನಿಮಾದ ಶೂಟಿಂಗ್ ಆರಂಭವಾಗುತ್ತಿದೆ. ಬೆಂಗಳೂರು, ಹೈದರಾಬಾದ್, ಅಯೋಧ್ಯೆ ಸೇರಿದಂತೆ ನಾನಾ ಕಡೆಗಳಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...