ನಾಳೆಯಿಂದ ರಾಜ್ಯಾದ್ಯಂತ ವಿಜಯ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದರ್ಶನ್ ಮತ್ತು ರಾಬರ್ಟ್ ಚಿತ್ರತಂಡ ಚಿತ್ರ ಗೆದ್ದಿರುವ ಖುಷಿಯನ್ನು ಅಭಿಮಾನಿಗಳ ಜತೆ ಹಂಚಿಕೊಳ್ಳಲು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಇಟ್ಟುಕೊಂಡಿತ್ತು.
ಆದರೆ ಇದೀಗ ರಾಬರ್ಟ್ ವಿಜಯ ಯಾತ್ರೆ ಕಾರ್ಯಕ್ರಮ ದಿಢೀರ್ ರದ್ದಾಗಿದೆ. ರಾಜ್ಯಾದ್ಯಂತ ಕೊರೋನಾವೈರಸ್ ನ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಬರ್ಟ್ ವಿಜಯ ಯಾತ್ರೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ಸ್ವತಃ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೇಳಿಕೊಂಡಿದ್ದಾರೆ. ಅಲೆ ರಾಜ್ಯದಲ್ಲಿ ಕಡಿಮೆಯಾದ ನಂತರ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡುವುದಾಗಿ ಇದೇ ಸಂದರ್ಭದಲ್ಲಿ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.