ರಾಮಜನ್ಮಭೂಮಿಗೆ ತಲುಪಿದ 2,400 ಕೆ.ಜಿ ತೂಕದ ಬೃಹತ್ ಘಂಟೆ

Date:

ಲಕ್ನೋ: ಅಯೋಧ್ಯೆ ರಾಮಜನ್ಮಭೂಮಿಗೆ 2,400 ಕೆ.ಜಿ ತೂಕದ ಬೃಹತ್ ಘಂಟೆ ತಲುಪಿದೆ. ಹೌದು ರಾಮಮಂದಿರ ಉದ್ಘಾಟನೆಗೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. 2,400 ಕೆ.ಜಿ ತೂಕದ ಬೃಹತ್ ಘಂಟೆ ಎಟಾಹ್ ಜಿಲ್ಲೆಯ ಜಲೇಸರ್ ಪಟ್ಟಣದಿಂದ ಈಗಾಗಲೇ ಅಯೋಧ್ಯೆ ತಲುಪಿದೆ. ಜಿಲ್ಲೆಯ ಉಪವಿಭಾಗಗಳಲ್ಲಿ ವಾಹನದ ಮೇಲೆ ಈ ಬೃಹತ್‌ ಘಂಟೆಯನ್ನು ಪ್ರದರ್ಶಿಸಿದ ನಂತರ ರೈಲಿನ ಮೂಲಕ ಸಾಗಿಸಲಾಗಿದ್ದು, ಅಯೋಧ್ಯೆಗೆ ತಲುಪಿದೆ.
ಸುಮಾರು 30 ಕಾರ್ಮಿಕರ ತಂಡದಿಂದ ಈ ಘಂಟೆ ತಯಾರಾಗಿದೆ. ಚಿನ್ನ, ಬೆಳ್ಳಿ, ತಾಮ್ರ, ಸತು, ಸೀಸ, ತವರ, ಕಬ್ಬಿಣ ಮತ್ತು ಪಾದರಸ ಹೀಗೆ ಒಟ್ಟು 8 ಲೋಹಗಳಿಂದ ತಯಾರಿಸಲಾಗಿದೆ. ಘಂಟೆಯ ಅಗಲ 15 ಅಡಿ ಮತ್ತು ಒಳಭಾಗದ ಅಗಲ 5 ಅಡಿ ಇದ್ದು, ಇದನ್ನು ತಯಾರಿಸಲು ಒಂದು ವರ್ಷ ಬೇಕಾಗಿದೆ.
ಲೋಹದ ಉದ್ಯಮಿ ಆದಿತ್ಯ ಮಿತ್ತಲ್ ಮಾತನಾಡಿ, ಸಹೋದರನಾಗಿದ್ದ ಜಲೇಸರ್ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿಕಾಸ್ ಮಿತ್ತಲ್ ಅವರು ಈಗ ನಮ್ಮೊಂದಿಗಿಲ್ಲ. ಅವರು ದೇವಾಲಯಕ್ಕೆ ಘಂಟೆಯನ್ನು ಕೊಡುಗೆಯಾಗಿ ನೀಡಲು ಬಯಸಿದ್ದರು. ಅದರಂತೆ ನಮ್ಮಿಂದ ಈ ಕೊಡುಗೆಯನ್ನು ಅಯೋಧ್ಯೆಗೆ ನೀಡಲಾಗಿದೆ. ಎಂದರು.

Share post:

Subscribe

spot_imgspot_img

Popular

More like this
Related

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...