ರಾಮನಗರದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ: ಕಿರುಕುಳ ತಾಳಲಾರದೆ ಮಹಿಳೆ ಸೂಸೈಡ್!
ರಾಮನಗರ:- ಸಾಲಗಾರರ ಕಿರುಕುಳಕ್ಕೆ ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರದ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದಲ್ಲಿ ಜರುಗಿದೆ.
ಯಶೋದಮ್ಮ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಶರಣಾದ ಮಹಿಳೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯಶೋದಮ್ಮ ಸುಮಾರು ಎಂಟು ಖಾಸಗಿ ಫೈನಾನ್ಸ್ ಕಂಪನಿಗಳಿಂದ 5 ಲಕ್ಷ ಸಾಲ ಪಡೆದಿದ್ದರು. ಕಳೆದ ಎರಡು ತಿಂಗಳಿನಿಂದ ಅನಾರೋಗ್ಯಕ್ಕೀಡಾದ ಹಿನ್ನೆಲೆ ಸರಿಯಾಗಿ ಕೆಲಸಕ್ಕೆ ಹೋಗದೇ ಸಾಲ ಮರುಪಾವತಿ ಮಾಡಿರಲಿಲ್ಲ. ಎರಡು ತಿಂಗಳು ಸಾಲ ಬಾಕಿ ಉಳಿಸಿಕೊಂಡ ಹಿನ್ನೆಲೆ ಫೈನಾನ್ಸ್ ಕಂಪನಿಯ ಸಿಬ್ಬಂದಿ ಮನೆ ಬಳಿ ಬಂದು ಗಲಾಟೆ ನಡೆಸಿ ಇನ್ನೆರಡು ದಿನದಲ್ಲಿ ಸಾಲ ಕಟ್ಟಲಿಲ್ಲ ಅಂದರೆ ಮನೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬೇಸತ್ತ ಯಶೋದಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನೂ ಇನ್ನೂ ಗ್ರಾಮದಲ್ಲಿ ಹಲವು ಮಂದಿ ಇದೇ ರೀತಿ ಫೈನಾನ್ಸ್ ಕಂಪನಿಯಲ್ಲಿ ಸಾಲ ಪಡೆದಿದ್ದು ನಿತ್ಯ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಗ್ರಾಮಕ್ಕೆ ಬಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಮನೆ ಜಪ್ತಿ ಮಾಡಿ ಬೆದರಿಕೆ ಹಾಕುತ್ತಿದ್ದಾರೆ.