ಉಪ ಚುನಾವಣೆ ಮುಗಿದ ಬಳಿಕ ಯಡಿಯೂರಪ್ಪ ಅವರು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿಯಾಗಿ ನೇಮಕಗೊಂಡರು ಹೀಗಿರುವಾಗ ಎಲ್ಲ ಕಡೆಯಿಂದಲೂ ಉಪಚುನಾವಣೆ ಬಳಿಕ ಯಾವಾಗ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂಬ ಗೊಂದಲದಲ್ಲಿ ಎಲ್ಲರೂ ಇದ್ದರು ಅದರೊಟ್ಟಿಗೆ ಇನ್ನೊಂದು ವಿಚಾರವಾದ ರಾಮನಗರ ಜಿಲ್ಲೆಯ ಮರುನಾಮಕರಣ ಮಾಡಬೇಕೆಂಬ ವಿಚಾರದಲ್ಲಿ ಸಿಎಂ ಯಾವ ರೀತಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಎಲ್ಲೂ ಪ್ರತಿಕ್ರಿಯೆ ನೀಡಿರಲಿಲ್ಲ ರಾಮನಗರ ಜಿಲ್ಲೆಯನ್ನು ಮರುನಾಮಕರಣ ಮಾಡುವ ಯಾವುದೇ ಚಿಂತನೆ, ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರ್ಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ. ಆದರೆ ಇದನ್ನು ಪ್ರತಿಪಕ್ಷಗಳು ರಾಜಕೀಯವಾಗಿ ಪರಿವರ್ತಿಸಿ ಮಾತನಾಡುತ್ತಿದ್ದಾರೆ. ಜನರಲ್ಲಿ ಗೊಂದಲ ಸೃಷ್ಟಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.