ರಾಮನ ಅತ್ತೆ ಮನೆ ಜನಕ್‌ಪುರದಲ್ಲಿಯೂ ಹಬ್ಬದ ವಾತಾವರಣ !

Date:

ಕಾಠ್ಮಂಡು: ರಾಮನ ಅತ್ತೆ ಮನೆ ಜನಕ್‌ಪುರದಲ್ಲಿಯೂ ಹಬ್ಬದ ವಾತಾವರಣ ಮನೆ ಮಾಡಿದೆ.

ನೇಪಾಳದ ಜನಕ್‌ಪುರದಲ್ಲಿರುವ ಜಾನಕಿ ದೇವಾಲಯದಲ್ಲಿ ಸಕಲ ತಯಾರಿಗಳು ನಡೆದಿದೆ. ಇನ್ನೂ ದೇಗುಲವು ವಿದ್ಯುದ್ದೀಪಗಳಿಂದ ಕಣ್ಮನ ಸೆಳೆಯುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ, ಜನಕ್‌ಪುರದಲ್ಲಿ ಸಂತೋಷ ಮತ್ತು ಹಬದ ರೀತಿಯಲ್ಲಿ ಸಂಭ್ರಮಿಸಲಾಗುತ್ತದೆ. ಇದು ಎರಡು ಸ್ಥಳಗಳ ನಡುವೆ ಹಂಚಿಕೊಂಡಿರುವ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಪರ್ಕವನ್ನು ಒತ್ತಿಹೇಳುತ್ತದೆ.

ಈ ಸಂಬಂಧ ಶ್ರೀರಾಮ ಯುವ ಸಮಿತಿಯ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ಚೌಧರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತ್ರೇತಾಯುಗದ ವನವಾಸದ ಸಂದರ್ಭದಲ್ಲಿ ರಾಮಚಂದ್ರ ಅನುಭವಿಸಿದ ನೋವು ಕಲಿಯುಗದಲ್ಲಿಯೂ ಮುಂದುವರಿದಿದೆ. ಬರೋಬ್ಬರಿ 500 ವರ್ಷಗಳ ಹೋರಾಟವನ್ನು ಮಾಡಬೇಕಾಯಿತು. ಈ ಸಮಯದಲ್ಲಿ ಅವರು ಟಾರ್ಪಾಲಿನ ಅಡಿಯಲ್ಲಿ ಆಶ್ರಯ ಪಡೆಯಬೇಕಾಗಿತ್ತು. ಅವರ ನೋವು ನಿಜಕ್ಕೂ ಎಲ್ಲಾ ಹಿಂದೂಗಳ ನೋವಾಗಿದೆ. ನಮ್ಮ ಪೂರ್ವಜರು ಕಷ್ಟಪಟ್ಟು ಹೋರಾಡಿದರು. ಇದೀಗ ಅಂತಿಮ ಫಲಿತಾಂಶವು ಇಂದು ಇಲ್ಲಿ ಮರ್ಯಾದಾಪುರುಷ ಭಗವಾನ್ ರಾಮನ ದೇವಾಲಯದ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಭಾರತೀಯರನ್ನು ಅಭಿನಂದಿಸುತ್ತೇನೆ ಮತ್ತು ಜನಕ್‌ಪುರದ ಜನ ಕೂಡ ಸಂತೋಷದಿಂದಿದ್ದಾರೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...