No menu items!
9.2 C
Munich
Friday, May 1, 2026

ರಾಮನ ಅವತಾರವೆತ್ತಿದ ರಿಷಿ ದರ್ಶನಕ್ಕೆ ರೆಡಿ !

Must read

ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ರಾಮನ ಅವತಾರವೆಂಬ ಸಿನಿಮಾವನ್ನು ಚುನಾವಣಾ ಗಡಿಬಿಡಿ ಕಳೆದ ಬಳಿಕ ಆದರೆ, ಚುನಾವಣಾ ಫಲಿತಾಂಶಕ್ಕೆ ಮೊದಲೇ ರಿಲೀಸ್‌ ಮಾಡಲು ಚಿತ್ರತಂಡ ಯೋಜಿಸಿದೆ. ರಾಮನ ಅವತಾರ ಸಿನಿಮಾವು ಮೇ 10ರಂದು ಬಿಡುಗಡೆಯಾಗಲಿದೆ. ರಿಷಿ, ಪ್ರಣೀತಾ ಸುಭಾಷ್, ಶುಭ್ರ ಅಯ್ಯಪ್ಪ ನಟಿಸಿರುವ ಈ ಸಿನಿಮಾಕ್ಕೆ ವಿಕಾಸ್ ಪಂಪಾಪತಿ ಆಕ್ಷನ್‌ ಕಟ್‌ ಹೇಳಿದ್ದಾರೆ.


ರಿಷಿ ರಾಮನ ಅವತಾರದಲ್ಲಿ ಸ್ಯಾಂಡಲ್‌ವುಡ್‌ ಚಿತ್ರಮಂದಿರಗಳಿಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿದ್ದಾರೆ. ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.‌‌ ಮೇ‌ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.


ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ಪ್ರತಿಭಾನ್ವಿತ ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.


ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್‌ನ ಈ ಚಿತ್ರಕ್ಕೆ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಹಿಡಿದಿದ್ದಾರೆ. ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಕಲನವಿದೆ. ರಾಮನ ಅವತಾರ ಸಿನಿಮಾದ ಶೂಟಿಂಗ್‌ ಅನ್ನು ಉಡುಪಿ, ಬೆಂಗಳೂರು ಸುತ್ತಮುತ್ತ ಮಾಡಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

- Advertisement -spot_img

More articles

- Advertisement -spot_img

Latest article