No menu items!
16.8 C
Munich
Friday, August 21, 2026

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ: ಶಂಕಿತನ ಜಾಡು ಹಿಡಿದ NIA ಗೆ ಸಿಕ್ಕಿತು ಚೆನ್ನೈ ಲಿಂಕ್

Must read

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಶಂಕಿತನ ಜಾಡು ಹಿಡಿದ ಎನ್ಐಎಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಇನ್ನೂ ಸ್ಫೋಟಕ್ಕೂ ಮುನ್ನ 2 ತಿಂಗಳು ಇತ ತಮಿಳುನಾಡಿನಲ್ಲಿದ್ದ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್ಐಎಗೆ ಇದನ್ನು ತಮಿಳುನಾಡಿನ ಮಾಲ್ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದ್ದು, ಜೊತೆಗೆ ಟೊಪ್ಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಇರುವುದು ಮಾಲ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಪತ್ತೆಯಾದ ಕ್ಯಾಪ್ನಲ್ಲಿ ಶಂಕಿತನ ಕೂದಲು ಪತ್ತೆಯಾಗಿದ್ದು, ಎನ್ಐಎ ಅಧಿಕಾರಿಗಳು ಡಿಎನ್ಎ ಟೆಸ್ಟ್ಗೆ ನೀಡಿದ್ದಾರೆ.
ಇನ್ನು ಎನ್ಐಎ ತನಿಖೆ ವೇಳೆ ಆ ಇಬ್ಬರು ಕರ್ನಾಟಕದವರೆಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಅವರು ಶಿವಮೊಗ್ಗೆ ಜಿಲ್ಲೆಯ ಮುಸಾವೀರ್ ಮತ್ತು ಹುಸೇನ್ ಶಬೀದ್ ಎಂಬ ಕುರಿತು ಸುಳಿವು ದೊರೆತಿದೆ. ಇವರು ಎರಡು ತಿಂಗಳು ತಮಿಳುನಾಡಿನ ಲಾಡ್ಜ್ನಲ್ಲಿ ಉಳಿದುಕೊಂಡಿರುವುದು ಕೂಡ ಪತ್ತೆಯಾಗಿದೆ. ಹಾಗಾದರೆ ಶಂಕಿತರಿಗೂ ತಮಿಳುನಾಡಿಗೂ ಏನು ಸಂಬಂಧ ಎಂಬ ಬಗ್ಗೆ ತನಿಖೆ ಶುರುವಾಗಿದ್ದು, ತನಿಖೆ ಚೂರುಕುಗೊಂಡಿದೆ.

- Advertisement -spot_img

More articles

- Advertisement -spot_img

Latest article