ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮಮಂದಿರದ ಉದ್ಘಾಟನೆ ಹಾಗೂ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆಗಾಗಿ ಬಿಜೆಪಿ ನಾಯಕರು ಹಾಗೂ ಸ್ವಾಮೀಜಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಕುರಿತು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ, ರಾಮ ಮಂದಿರ ಉದ್ಘಾಟನೆ ಅಂತ ರಾಜ್ಯದಲ್ಲಿ ಸರ್ಕಾರಿ ರಜೆಯನ್ನು ನೀಡುವುದಿಲ್ಲ. ಆದರೆ, ರಾಜ್ಯಾದ್ಯಂತ ಎಲ್ಲ ಮುಜರಾಯಿ ಇಲಾಖೆ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ನಾಳೆ ನಾನು ಮಹದೇವಪುರದಲ್ಲಿ ನಿರ್ಮಾಣವಾಗುತ್ತಿರುವ ರಾಮ ದೇವಸ್ಥಾನ ಉದ್ಘಾಟನೆಗೆ ಹೋಗುತ್ತಿದ್ದೇನೆ. ಅವರು ಆಹ್ವಾನ ಕೊಟ್ಟಿದ್ದಾರೆ ಅದಕ್ಕಾಗಿ ಹೋಗುತ್ತಿದ್ದೇನೆ ಪಾನಕ ನೀಡುತ್ತಾರೋ, ಫಲಾಹಾರ ನೀಡುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.
ರಾಮ ಮಂದಿರ ಉದ್ಘಾಟನೆ ಅಂತ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ !
Date: