ಬೆಂಗಳೂರು: ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವುದು ಕಾಂಗ್ರೆಸ್‌ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಇನ್ನೂ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ ಎಂದು ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ಆಗುತ್ತಿರುವುದು ಕಾಂಗ್ರೆಸ್ʼಗೆ ಸಹಿಸಲು ಆಗುತ್ತಿಲ್ಲ !
Date: