ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

tnit editors
1 Min Read

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವೇಂದ್ರಪ್ಪ ಸ್ವಾಮಿ, ಸರ್ಕಾರಿ ಸೇವೆಯಲ್ಲಿ ಇದ್ದುಕೊಂಡೇ ಮಠವನ್ನು ಸ್ಥಾಪಿಸಿದ್ದರು. ಸಿಂಧನೂರು ತಾಲೂಕಿನ ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೂಲತಃ ಗಜೇಂದ್ರಗಡ ತಾಲೂಕಿನ ಗುಳಗುಳಿ ಗ್ರಾಮದವರಾದ ಅವರು, ಕಳೆದ 20 ವರ್ಷಗಳಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಜೀವನದಲ್ಲಿ ವೈರಾಗ್ಯ ಮೂಡಿದ ಹಿನ್ನೆಲೆಯಲ್ಲಿ ಮಠವನ್ನು ನಿರ್ಮಿಸಿಕೊಂಡು, ಶಾಲಾ ಅವಧಿಯ ಬಳಿಕ ಸಂಜೆ ವೇಳೆಯಲ್ಲಿ ಧಾರ್ಮಿಕ ಪ್ರವಚನ ನೀಡುತ್ತಿದ್ದರು.
ಕುಟುಂಬದಿಂದ ದೂರವಿದ್ದು ಬದುಕುತ್ತಿದ್ದ ದೇವೇಂದ್ರಪ್ಪ ಸ್ವಾಮಿ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಖಿನ್ನತೆಯೇ ಕಾರಣವಾಗಿರಬಹುದು ಎಂದು ಭಕ್ತರು ಹಾಗೂ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಠದ ಭೋಜನಾ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article