ಗುಜರಾತ್ ನಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನರೇಂದ್ರ ಮೋದಿಗೆ ಭರವಸೆಯಿರಲಿಲ್ಲ. ಹೀಗಾಗಿ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡುವ ಬಗ್ಗೆ ಮೋದಿಗೆ ಅಮಿತ್ ಶಾ ಸೂಚನೆ ನೀಡಿರಬಹುದು ಎಂದು ಗೆಹ್ಲೋಟ್ ಹೇಳಿದ್ದಾರೆ.
ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ರಾಷ್ಟ್ರಪತಿಗಳ ಕ್ಷಮೆ ಕೋರಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಗೆಹ್ಲೊಟ್ ಹೇಳಿಕೆಯಿಂದ ದಲಿತ ಹಾಗೂ ಹಿಂದುಳಿದ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ.