ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಎರಡು ಹೋಳಾದರೂ ಆಶ್ಚರ್ಯಪಡಬೇಕಿಲ್ಲ !

Date:

ಕಲಬುರಗಿ: ಸಾರ್ವತ್ರಿಕ ಚುನಾವಣೆ ಫಲಿತಾಂಶಗಳ ನಂತರ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ ಎಂದು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಻ವರು, ಚುನಾವಣಾ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೀಡಿದ ಹೇಳಿಕೆಗಳನ್ನು ಗಮನಿಸಿದರೆ ವೈಯಕ್ತಿಕ ಪ್ರತಿಷ್ಠೆಯ ಪೈಪೊಟಿ ತೀವ್ರಗೊಂಡಿರುವುದು ಸ್ಪಷ್ಟವಾಗುತ್ತದೆ.
ಸಾರ್ವತ್ರಿಕ ಚುನಾವಣೆ ಫಲಿತಾಂಶಗಳ ನಂತರ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗೋದು ಶತಸಿದ್ಧ, ಅದರ ಜೊತೆಗೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಎರಡು ಹೋಳಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಬೊಮ್ಮಾಯಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಲವಾರು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಷೆಯ ಮತ್ತೊಂದು ಪ್ರತೀಕ ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಅಂತ ಅವರಿಗೆ ಗೊತ್ತಿದೆ ಎಂದು ಬೊಮ್ಮಾಯಿ ಹೇಳಿದರು.

Previous article
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಹಾಗೂ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಹೀಗಾಗಲೇ ಜಾಮೀನು ಮಂಜೂರು ಆಗಿದ್ರೂ ರೇವಣ್ಣಗೆ ಚಿಂತೆ ಮಾತ್ರ ತಪ್ಪಿಲ್ಲ. ಎರಡು ಕೇಸ್ ನಲ್ಲಿ ರಿಲೀಫ್ ಸಿಗ್ತಿದ್ದಂತೆ ಹೆಚ್ ಡಿ ರೇವಣ್ಣಗೆ ಮತ್ತೊಂದ್ಕಡೆ ಟೆನ್ಷನ್ ಶುರುವಾಗಿದೆ. ಹೈಕೋರ್ಟ್ ನಲ್ಲಿ ಏನು ಬೆಳವಣಿಗೆಯಾಗುತ್ತೋ ಎಂಬ ಟೆಂಕ್ಷನ್ ಕಾಡತೊಡಗಿದೆ. ಸದ್ಯ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಬೇಕಿದೆ..ರೇವಣ್ಣ ಪರ ಹಿರಿಯ ವಕೀಲ ಸಿವಿ ನಾಗೇಶ್ ವಕಾಲತ್ತು ವಹಿಸಿದ್ದಾರೆ. ಈ ನಡುವೆ ಪ್ರಬಲ ಸ್ಪರ್ಧಿಯಾಗಿ ಹಿರಿಯ ವಕೀಲ ರವಿವರ್ಮಕುಮಾರ್ ಎಸ್ ಪಿಪಿಯಾಗಿ ನೇಮಕ ಮಾಡಲಾಗಿದೆ. ಒಂದ್ಕಡೆ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳುವ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ. ಇನ್ನೆರಡ್ಮೂರು ದಿನದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಸಾಧ್ಯತೆ ಇದ್ದು, ಸಂತ್ರಸ್ಥೆ ಹೇಳಿಕೆ ದಾಖಲಿಸಿರೋ ಬಗ್ಗೆ ತೀವ್ರ ವಿಚಾರಣೆ ನಡೆಸಲು ಎಸ್ ಐಟಿ ಸಸಜ್ಜಾಗಿದೆ. ಇದೇ ವೇಳೆ ಮಗ ನಾಪತ್ತೆ ಬಗ್ಗೆಯೂ ವಿಚಾರಣೆ ನಡೆಸೋ ಸಾಧ್ಯತೆ ಇದೆ. ಇನ್ನು ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಸರಿಯಾಗಿ ಬಾಯ್ಬಿಟ್ಟಿಲ್ಲ. ಎಸ್ ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಅಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಹೀಗಾಗಿ ಕಿಡ್ನಾಪ್ ಪ್ರಕರಣದಲ್ಲಿ ವಿಚಾರಣೆ ಮಡೋದೆ ಎಸ್ ಐಟಿಗೆ ಚಾಲೆಂಜ್ ಆಗಿದೆ. ಒಟ್ನಲ್ಲಿ ಸಂತ್ರಸ್ಥೆ ಮಹಿಳೆ ಹೇಳಿಕೆ ಹಾಗೂ ಟೆಕ್ನಿಕಲ್ ಎವಿಡೆನ್ಸ್ ಮೇಲೆ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ.
Next article

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...