ಟೀಮ್ ಇಂಡಿಯಾದ ಮಾಜಿ ನಾಯಕ, ಜೂನಿಯರ್ ಕ್ರಿಕೆಟ್ ತಂಡದ ಗುರು ರಾಹುಲ್ ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಕೋಚ್ ಆಗಿ ನೇಮಕವಾಗುವ ಸಾಧ್ಯತೆ ಇದೆ. ದ್ರಾವಿಡ್ ಅವರನ್ನು ಮುಖ್ಯ ತರಬೇತಿದಾರರನ್ನಾಗಿ ನೇಮಕ ಮಾಡಲು ಬಿಸಿಸಿಐ ಪ್ರಕ್ರಿಯೆ ಆರಂಭಿಸಿದೆ ರಾಹುಲ್ ದ್ರಾವಿಡ್ ಅವರನ್ನು ಎನ್‍ಸಿಎ ಮುಖ್ಯ ತರಬೇತಿದಾರರನ್ನಾಗಿ ನೇಮಕ ಮಾಡಲು ಬಿಸಿಸಿಐ ಪ್ರಕ್ರಿಯೆಯನ್ನು ಆರಂಭಿಸಿದೆ.
ಬಿಸಿಸಿಐ ಹೆಡ್ ಕೋಚ್ ಹುದ್ದೆಯನ್ನು ಹೊಸದಾಗಿ ಸೃಷ್ಠಿಸಿದ್ದು, ಈ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಟೀಮ್ ಇಂಡಿಯಾದ ಅಂಡರ್ 19, ಟೀಂ ಇಂಡಿಯಾ ‘ಎ’ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲು ಯೋಚನೆ ಮಾಡಿದೆ. ಸದ್ಯ ಎನ್‍ಸಿಎ ಜವಾಬ್ದಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತುಫಾನ್ ಘೋಷ್ ಅವರ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ರಾಹುಲ್ ದ್ರಾವಿಡ್ ಕೋಚ್ ಆಗ್ತಾರಾ?
Date: