ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

Date:

ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

ರಾಮನಗರ: ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕೀಡಾದ ಘಟನೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.
ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‍ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...