ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ!
ನವದೆಹಲಿ: ಇತ್ತೀಚೆಗೆ ಶಾಲಾ-ಕಾಲೇಜು, ಹೋಟೆಲ್, ಏರ್ಪೋರ್ಟ್ಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಇನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಜನಪ್ರಿಯ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿತ್ತು. ಇದೀಗ ಮತ್ತೊಮ್ಮೆ ದೆಹಲಿಯ ಆರು ಶಾಲೆಗಳಿಗೆ ಶುಕ್ರವಾರ ಮುಂಜಾನೆ ಬಾಂಬ್ ಬೆದರಿಕೆ ಕರೆಗಳು ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಕರೆ ಬಂದಿದ್ದು, ವಾರದಲ್ಲಿ ಎರಡನೇ ಪ್ರಕರಣ ದಾಖಲಾಗಿದೆ
ಡಿ.9 ರಂದು ಇದೇ ರೀತಿಯ ಬೆದರಿಕೆ ಕರೆ ಬಂದಿತ್ತು. ಕನಿಷ್ಠ 44 ಶಾಲೆಗಳು ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಸ್ವೀಕರಿಸಿದ್ದವು. ನಂತರ, ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ನಿರ್ಧರಿಸಿದ್ದರು. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರದೊಳಗೆ ಶಾಲೆಗಳಿಗೆ ಎರಡನೇ ಬಾರಿ ಬಾಂಬ್ ಬೆದರಿಕೆ ಬಂದಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.