ಬಳ್ಳಾರಿಯಲ್ಲಿ ಕೆ.ಎಲ್ ರಾಹುಲ್

Date:

ಬಳ್ಳಾರಿ: ಭಾರತ ಕ್ರಿಕೆಟ್ ತಂಡದ ಆಟಗಾರ ಕೆ ಎಲ್ ರಾಹುಲ್‌ ಅವರು ಶನಿವಾರ ಬಳ್ಳಾರಿ ಬಳಿಯ ತೋರಣಗಲ್ ಜಿಂದಾಲ್ ಸಮೂಹ ಸಂಸ್ಥೆಗೆ ಭೇಟಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಜಿಂದಾಲ್ ಸಮೂಹ ಸಂಸ್ಥೆಯ ಬ್ರಾಂಡ್ ಅಂಬಾಸಿಡರ್ ಆಗಿ ರಾಹುಲ್‌ ಆಯ್ಕೆ ಆಗಿದ್ದಾರೆ. ಹೀಗಾಗಿ ಜಿಂದಾಲ್ ಸಂಸ್ಥೆಯ ಸ್ಟೀಲ್ ಫ್ಯಾಕ್ಟರಿಗೆ ಭೇಟಿ ನೀಡಿದ್ದಾರೆ.

ಜಿಂದಾಲ್ ಸಮೂಹ ಸಂಸ್ಥೆಯಲ್ಲಿ ಜಾಹೀರಾತು ಶೂಟ್ ಮಾಡಲಾಗಿದ್ದು, ಎರಡು ಮೂರು ದಿನ ಇಲ್ಲಿಯೇ ಇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜಾಹೀರಾತು ಮಾಡುವ ಇಬ್ಬರು ತಾಂತ್ರಿಕ ಸಿಬ್ಬಂದಿ ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ರಾಹುಲ್‌ ಜೊತೆಯಲ್ಲಿ ಇದ್ದಾರೆ. ಕೋವಿಡ್ 19 ಮುಂಜಾಗ್ರತೆಯಿಂದ ಸಾಮಾಜಿಕ ಅಂತರ, ಮಾಸ್ಕ್ ಧರಿಸಿಕೊಂಡೇ ಜಿಂದಾಲ್‌ನಲ್ಲಿ ರಾಹುಲ್‌ ತಿರುಗಾಡಿದ್ದಾರೆ.‌

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...