ರಾಹುಲ್ ಗಾಂಧಿ ಆರೋಪದಲ್ಲಿ ಯಾವುದೇ ಆಧಾರವಿಲ್ಲ: ಜಗದೀಶ್ ಶೆಟ್ಟರ್
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪ ಮಾಡಿರುವುದನ್ನು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ತೀವ್ರವಾಗಿ ಖಂಡಿಸಿದ್ದಾರೆ. ರಾಹುಲ್ ಹೇಳಿಕೆಯಲ್ಲಿ ಯಾವುದೇ ಆಧಾರವಿಲ್ಲ ಎಂದು ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶೆಟ್ಟರ್, “ರಾಹುಲ್ ಗಾಂಧಿಯವರು ಈಗ ಆರೋಪ ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದೆಯೇ ಯಾಕೆ ಪ್ರಶ್ನೆ ಮಾಡಲಿಲ್ಲ? ಅವರ ಪಕ್ಷದ ಬೆಂಗಳೂರು ಸೆಂಟ್ರಲ್ ಅಭ್ಯರ್ಥಿಯೇ ಯಾಕೆ ಈ ವಿಷಯವನ್ನು ಎತ್ತಿಕೊಡಲಿಲ್ಲ?” ಎಂದು ಪ್ರಶ್ನಿಸಿದರು.
ಅವರ ಬಳಿ ನಿಖರ ದಾಖಲೆಗಳಿದ್ದರೆ, ಅದನ್ನು ಕೋರ್ಟ್ ಅಥವಾ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಸೂಚಿಸಿದ ಶೆಟ್ಟರ್, “ಸ್ವಾಯತ್ತ ಸಂಸ್ಥೆಗಳ ಮೇಲಿನ ಆರೋಪ ಸರಿಯಲ್ಲ. ಪ್ರಧಾನಿ ಮೋದಿಯವರನ್ನು ಟೀಕೆ ಮಾಡುವುದು, ಅಮೆರಿಕಾ, ಟ್ರಂಪ್ ಅಥವಾ ಚೀನಾವಿನ ಪರ ಮಾತಾಡುವುದು ರಾಹುಲ್ ಗಾಂಧಿಯವರ ಈಚಿನ ಕೆಲಸವಾಗಿದೆ, ಎಂದು ಟೀಕಿಸಿದರು