ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿಯವರದು ಹೋರಾಟದ ಮನೋಭಾವ. ಎಐಸಿಸಿ ಅಧ್ಯಕ್ಷರಾದ ಮೇಲೆ ಹಲವು ವಿಷಯಗಳನ್ನು ಇಟ್ಟುಕೊಂಡು ಅವರು ಹೋರಾಟ ನಡೆಸಿದ್ದರು. ಪ್ರಧಾನಿ ಮೋದಿ ಅವರಿಗಿಂತ ಹೆಚ್ಚು ಪ್ರಚಾರ ಮಾಡಿದ್ದರು. ಆದರೆ, ದೇಶದ ಜನ ಮೋದಿಯವರಿಗೆ ಆಶೀರ್ವಾದ ಮಾಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿ ಕಾರಣವಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
ಹೆಚ್. ವಿಶ್ವನಾಥ್ ಪಕ್ಷದಿಂದ ಹೊರಗೆ ಹೋಗುವುದಿಲ್ಲ ಎಂದು ಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 80 ಕೋಟಿ ಕೊಟ್ಟರೆ ನಿಮ್ಮ ಜೊತೆ ಇರುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾಗಿ ಪಿರಿಯಾಪಟ್ಟಣ ಜೆಡಿಎಸ್ ಶಾಸಕ ಕೆ.ಮಹದೇವ್ ನೀಡಿದ ಹೇಳಿಕೆ ಪ್ರತಿಕ್ರಿಯೆ ನೀಡಿದ ಗೌಡರು, ನನ್ನನ್ನು ಏನು ಕೇಳಬೇಡಿ. ಇಂತಹ ವಿಚಾರಗಳ ಬಗ್ಗೆ ನನ್ನನ್ನು ಕೇಳಬೇಡಿ. ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.