ಬಂಡಿಪುರ ಅಭಯಾರಣ್ಯ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಇದನ್ನು ತೆರವುಗೊಳಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ವನ್ಯಜೀವಿ ಸಂರಕ್ಷಣೆ ಉದ್ದೇಶದಿಂದ ರಾತ್ರಿ ಸಂಚಾರ ನಿಷೇಧಿಸಿದ್ದು, ಕೇರಳದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಬೇಕೆಂದು ಹೋರಾಟ ನಡೆದಿದ್ದು, ಇದಕ್ಕೆ ಬೆಂಬಲಿಸಿರುವ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದೆ. ಅಲ್ಲದೇ, ಅವರ ಹೇಳಿಕೆ ವಿರುದ್ಧ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.