ರಿಷಭ್ ಪಂತ್ ಆಸ್ಪತ್ರೆಗೆ ದಾಖಲು

1
34

ಭಾರತದ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಭಾರತ vs ಆಸ್ಟ್ರೇಲಿಯಾ ತೃತೀಯ ಪಂದ್ಯದಲ್ಲಿ ಗಾಯಕ್ಕೀಡಾಗಿರುವ ಪಂತ್ ಅವರನ್ನು ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಪಂತ್‌, ಪ್ಯಾಟ್ ಕಮಿನ್ಸ್ ಓವರ್‌ನಲ್ಲಿ ಶಾರ್ಟ್ ಬಾಲ್ ಅನ್ನು ಮಿಸ್ ಮಾಡಿದರು. ಚೆಂಡು ಪಂತ್ ಅವರ ಎಡಗೈಗೆ ಬಡಿಯಿತು. ಚೆಂಡು ಜೋರಾಗಿ ಬಡಿದಿದ್ದರಿಂದ ಪಂತ್‌ ಗಾಯಕ್ಕೀಡಾಗಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಪಂತ್ 36 ರನ್‌ಗೆ ಜೋಶ್ ಹ್ಯಾಝಲ್ವುಡ್‌ಗೆ ವಿಕೆಟ್ ನೀಡಿದ್ದರು.

ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 105.4 ಓವರ್‌ಗೆ 338 ರನ್ ಪೇರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 100.4 ಓವರ್‌ಗೆ 244 ರನ್ ಬಾರಿಸಿ 94 ರನ್ ಹಿನ್ನಡೆ ಅನುಭವಿಸಿದೆ. ಆಸ್ಟ್ರೇಲಿಯಾ ಸದ್ಯ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ


ಟೀಮ್ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಅರ್ಧ ಶತಕವನ್ನು ಬಾರಿಸಿ ಮಿಂಚಿದ್ದಾರೆ. ಇದು ಶುಭ್ಮನ್ ಗಿಲ್ ಅವರ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಗಿದೆ. ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್‌ ಆರಂಭಿಸಿದ ಗಿಲ್ ಮೊದಲ ವಿಕೆಟ್‌ಗೆ 70 ರನ್‌ಗಳ ಜೊತೆಯಾಟವನ್ನು ನೀಡಿದರು.
ಶುಭ್ಮನ್ ಗಿಲ್ 101 ಎಸೆತಗಳನ್ನು ಎದುರಿಸಿ 50 ರನ್ ಗಳಿಸಿದರು. ಬಳಿಕ ಪ್ಯಾಟ್ ಕಮ್ಮಿನ್ಸ್ ಎಸೆತದಲ್ಲಿ ಕ್ಯಾಮರೂನ್ ಗ್ರೀನ್‌ಗೆ ವಿಕೆಟ್ ಒಪ್ಪಿಸಿ ಹೊರನಡೆದರು. 49.50 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಗಿಲ್ ಇನ್ನಿಂಗ್ಸ್‌ನಲ್ಲಿ 8 ಬೌಂಡರಿಗಳು ಒಳಗೊಂಡಿದ್ದವು. ಈ ಮೂಲಕ ಏಷ್ಯಾದಿಂದ ಹೊರಗೆ ಅರ್ಧ ಶತಕ ಸಿಡಿಸಿದ ನಾಲ್ಕನೆ ಕಿರಿಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು
ಶುಭ್ಮನ್ ಗಿಲ್ ಮೆಲ್ಬರ್ನ್‌ನಲ್ಲಿ ನಡೆದ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿದ್ದರು. ಅಲ್ಲಿಯೂ ಆತ್ಮವಿಶ್ವಾಸದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಗಿಲ್ ಮೊದಲ ಇನ್ನಿಂಗ್ಸ್‌ನಲ್ಲಿ 45 ರನ್ ಗಳಿಸಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲೂ 35 ರನ್ ಸಿಡಿಸಿ ಅಜೇಯವಾಗುಳಿದಿದ್ದರು. ತಮ್ಮ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಅರ್ಧ ಶತಕವನ್ನು ಬಾರಿಸುವಲ್ಲಿ ಗಿಲ್ ಯಶಸ್ವಿಯಾಗಿದ್ದಾರೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಶುಭ್ಮನ್ ಗಿಲ್ ಆಸ್ಟ್ರೇಲಿಯಾದ ಬೌಲರ್‌ಗಳ ದಾಳಿಯನ್ನು ಆತ್ಮವಿಶ್ವಾಸದಿಂದಲೇ ಎದುರಿಸಿದರು. ಮತ್ತೊಂದೆಡೆ ಸುದೀರ್ಘ ಕಾಲದ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ಮರಳಿರುವ ರೋಹಿತ್ ಶರ್ಮಾ ಉತ್ತಮ ಲಯದಲ್ಲಿರುವಂತೆ ತೋರಿದರಾದರೂ ಅವರ ಆಟ 26 ರನ್‌ಗಳಿಗೆ ಅಂತ್ಯವಾಗಿದೆ. 77 ಎಸೆತವನ್ನು ಎದುರಿಸಿದ ರೋಹಿತ್ ಶರ್ಮಾ 3 ಬೌಂಡರಿ ಹಾಗೂ 1 ಸಿಕ್ಸ್ ಸಿಡಿಸಿದರು.
ರೋಹಿತ್ ಶರ್ಮಾ ಜೋಶ್ ಹ್ಯಾಸಲ್‌ವುಡ್ ಎಸೆತದಲ್ಲಿ ಅವರಿಗೆ ಕ್ಯಾಚ್‌ ನೀಡುವ ಮೂಲಕ ನಿರ್ಗಮಿಸಿದರು. ಬಳಿಕ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಬ್ಯಾಟಿಂಗ್‌ಗೆ ಇಳಿಸಿದ್ದು ನಿಧಾನಗತಿಯನ್ನು ಬ್ಯಾಟಿಂಗ್ ಮುಂದುವರಿಸಿದರು. ಎರಡನೇ ದಿನದಾಟ ಅಂತ್ಯದ ವೇಳೆಗೆ ಭಾರತ 96 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದು 242 ರನ್‌ಗಳ ಹಿನ್ನೆಡೆಯಲ್ಲಿದೆ.

1 COMMENT

LEAVE A REPLY

Please enter your comment!
Please enter your name here