ರೇಣುಕಸ್ವಾಮಿ ಹತ್ಯೆ ಕೇಸ್: ದರ್ಶನ್ ಮಧ್ಯಂತರ ಜಾಮೀನು ಅರ್ಜಿ ವಿಸ್ತರಿಸಿದ ಹೈಕೋರ್ಟ್!

Date:

ರೇಣುಕಸ್ವಾಮಿ ಹತ್ಯೆ ಕೇಸ್: ದರ್ಶನ್ ಮಧ್ಯಂತರ ಜಾಮೀನು ಅರ್ಜಿ ವಿಸ್ತರಿಸಿದ ಹೈಕೋರ್ಟ್!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಮಧ್ಯಂತರ ಜಾಮೀನಿನ ಮೇಲೆ ಹೊರಗಡೆ ಇರುವ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿ ಹೈಕೋರ್ಟ್‌ ಆದೇಶ ನೀಡಿದೆ. ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಾಡಿದ್ದಾರೆ.
ದರ್ಶನ್ ಅವರ ಪರವಾಗಿ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದರು. ಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲ ಎಂಬ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಸಿ.ವಿ. ನಾಗೇಶ್ ಹೇಳಿದ್ದರು. ಬಳ್ಳಾರಿ ಜೈಲಿನಲ್ಲಿ ಇದ್ದಾಗ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡಿತ್ತು.
ಅಲ್ಲಿಯೇ ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಎಲ್ಲ ವರದಿಗಳನ್ನು ಆಧರಿಸಿ ದರ್ಶನ್ಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಅವರ ಜಾಮೀನು ಅವಧಿ ಡಿಸೆಂಬರ್ 11ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ ವಿಸ್ತರಣೆಗಾಗಿ ಮನವಿ ಮಾಡಲಾಗಿತ್ತು. ಈಗ ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...