No menu items!
25.3 C
Munich
Friday, July 24, 2026

ರೇಣುಕಾಸ್ವಾಮಿ ಕುಟುಂಬ ಭೇಟಿ ಮಾಡಿದ ವಿನೋದ್ ರಾಜ್: 1 ಲಕ್ಷ ನೆರವು!

Must read

ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು ನೀಡಿದ್ದಾರೆ. ಚಿತ್ರರಂಗದ ಕೆಲ ನಿರ್ದೇಶಕರ ಜೊತೆ ಬೆಳಗ್ಗೆ ಚಿತ್ರದುರ್ಗಕ್ಕೆ ಆಗಮಿಸಿ ವಿಆರ್ ಎಸ್ ಬಡಾವಣೆಯಲ್ಲಿರುವ ಸ್ವಾಮಿ ಮನೆಗೆ ಭೇಟಿ ನೀಡಿದರು. ಇದೇ ವೇಳೆ ಸ್ವಾಮಿ ತಂದೆ-ತಾಯ್, ಪತ್ನಿ , ಪೋಷಕರಿಗೆ ಆತ್ಮಸ್ಥೈರ್ಯ ತುಂಬಿ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ್ದಾರೆ. ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ವಿನೋದ್ ರಾಜ್, ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿದ್ದೇನೆ.
ಮನೆಗೆ ಆಧಾರವಾಗಿದ್ದ ಮಗನ ಕಳೆದುಕೊಂಡು ನೋವಿನಲ್ಲಿದ್ದಾರೆ, ಇಂತಹ ಘಟನೆ ನಡೆದು ಹೋಗಬಾರದಿತ್ತು. ಒಂದು ಜೀವ ತೆಗೆಯಲು ಯಾರಿಗೂ ಹಕ್ಕು ಇಲ್ಲ. ಮಾನವೀಯತೆ ಎಲ್ಲಿ ಹೋಗಿದೆ ಅನ್ನೋದು ಪ್ರಶ್ನೆ, ಕಲಾವಿದರನ್ನು ನೋಡಿ ಜನ ಅನುಕರಣೆ ಮಾಡ್ತಾರೆ. ಕಲಾವಿದರು ಒಳ್ಳೆಯದನ್ನೇ ಜನರಿಗೆ ಕೊಡುವ ಕೆಲಸ ಮಾಡ್ಬೇಕು. ಕಲಾವಿದರು ಎಂಬ ಪಟ್ಟ ಕೊಟ್ಟು ಜವಾಬ್ದಾರಿ ಕೊಟ್ಟಿದ್ದಾರೆ ಜನ, ನಾವು ಏನು ಮಾಡಿದರೂ ಜನ ನೋಡ್ತಾರೆ. ನಾವು ವಿವೇಕದಿಂದ ಮಾತಾಡಬೇಕು, ಒಳ್ಳೆ ಕೆಲಸ ಮಾಡ್ಬೇಕು ಎಂದು ಹೇಳಿದರು

- Advertisement -spot_img

More articles

- Advertisement -spot_img

Latest article