No menu items!
20.3 C
Munich
Monday, June 15, 2026

ರೇಣುಕಾಸ್ವಾಮಿ ಕೇಸ್: ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುತ್ತೆ – ದಯಾನಂದ್

Must read

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೇಸ್ ತನಿಖೆ ನಡೆಸಿರುವ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ.
ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್ಎಸ್ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್ನ ಎಫ್ಎಸ್ಎಲ್ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವರುಗಳ ಹೊರತಾಗಿಯೇ ನಾವು ವರದ ಸಲ್ಲಿಕೇ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.

- Advertisement -spot_img

More articles

- Advertisement -spot_img

Latest article